ಹಲೋ ಸ್ನೇಹಿತರೇ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಹವಾಮಾನ ವೈಪರಿತ್ಯ ಉಂಟಾಗಿದೆ. ಇದರಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಡಿಸೆಂಬರ್ 22ರವರೆಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಕೋಲಾರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಪ್ರಸ್ತುತ ರಾಜ್ಯದಲ್ಲಿ ಚಳಿಗಾಲ ಶುರುವಾಗಿದೆ. ದಟ್ಟ ಮಂಜಿನೊಂದಿಗೆ ಮುಂಜಾನೆ ಆರಂಭವಾಗುತ್ತಿದೆ. ಬೆಳಗ್ಗೆ ಹಾಗೂ ಸಂಜೆ ಮೈ ಕೊರೆಯುವ ಚಳಿ ಇದ್ದು ಮಧ್ಯಾಹ್ನ ನೆತ್ತಿ ಸುಡುವ ಬಿಸಿಲನ್ನು ಗಾಳಿ ತಂಪು ಮಾಡುತ್ತಿದೆ. ಡಿಸೆಂಬರ್ ಆರಂಭದವರೆಗೂ ರಾಜ್ಯದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ಚಳಿ ಹೆಚ್ಚಾಗುತ್ತಿರುವ ಸಮಯದಲ್ಲಿ ಮಳೆ ಮುನ್ಸೂಚನೆಯಿಂದಾಗಿ ಜನರನ್ನು ಆರೋಗ್ಯದ ಬಗ್ಗೆ ಯೋಚಿಸುವಂತೆ ಮಾಡಿದೆ. ಬೆಂಗಳೂರಿನಲ್ಲೂ ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ಜನ ಮನೆ ಬಿಟ್ಟು ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ರಾತ್ರಿ ಹಾಗೂ ಬೆಳಗಿನ ಜಾವ ಚಳಿ ಹೆಚ್ಚಾಗುತ್ತಿದ್ದು ಶಾಲೆಗೆ ಹಾಗೂ ಕೆಲಸಕ್ಕೆ ಹೋಗುವ ಜನ ಸ್ವೆಟರ್, ಹ್ಯಾಂಡ್ ಗ್ಲೌಸ್, ಬೆಚ್ಚಗಿನ ಬಟ್ಟೆ ಧರಿಸಿ ಮನೆಯಿಂದ ಹೊರಬರಬೇಕಾದ ವಾತಾವರಣವಿದೆ. ಇದರ ನಡುವೆ ಮುಂದಿನ 24 ಗಂಟೆಗಳಲ್ಲಿ ನಗರದಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.
ಇದನ್ನೂ ಸಹ ಓದಿ : ರೈತರಿಗೆ ಸಿಹಿ ಸುದ್ದಿ! 2 ಲಕ್ಷ ಬಡ್ಡಿ ರಹಿತ ಸಾಲ ಪಡೆಯಲು ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
ಕರ್ನಾಟಕದಲ್ಲಿ 23, 24, 25ರಂದು ಸಾಧಾರಣ ಮಳೆ:
ಉದ್ಯಾನ ನಗರಿ ಬೆಂಗಳೂರಿನಲ್ಲಿ (ಡಿಸೆಂಬರ್ 20) ಶುಕ್ರವಾರ ಚಳಿ ಕಡಿಮೆಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಮತ್ತು ಚಳಿಯ ಪರಿಸ್ಥಿತಿ ಗಣನೀಯವಾಗಿ ಇಳಿಕೆಯಾಗಿದೆ. ಮುಂದಿನ ಸೋಮವಾರ (ಡಿಸೆಂಬರ್ 23) ಚಾಮರಾಜನಗರ, ಮಂಡ್ಯ ಹಾಗೂ ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಕನ್ನಡ, ರಾಮನಗರ, ಚಾಮರಾಜನಗರ, ಮೈಸೂರು, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಡಿಸೆಂಬರ್ 24 ಹಾಗೂ 25ರಂದು ಹಗುರ ಮಳೆಯಾಗಲಿದೆ. ಇನ್ನೂ ತಮಿಳುನಾಡಿನಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಸೂಚಿಸಿದೆ.
ವಾಯುಭಾರ ಕುಸಿತದಿಂದಾಗಿ ಕಳೆದ ಕೆಲ ದಿನಗಳಿಂದ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳವರೆಗೂ ತಮಿಳುನಾಡಿನಲ್ಲಿ ಮಳೆ ಮುಂದುವರೆಯಲಿದೆ. ಅಲ್ಲದೇ ಇಂದು ಕೂಡ ಕಾಂಚೀಪುರಂ, ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು ಸೇರಿದಂತೆ ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ (IMD) ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ತಮಿಳುನಾಡಿನ ಈ ಪ್ರದೇಶಗಳಲ್ಲಿ ತೀವ್ರ ಹವಾಮಾನ ಪರಿಸ್ಥಿತಿಗಳು ಬದಲಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ಹವಾಮಾನ ಮುನ್ಸೂಚನೆ:-
ಉತ್ತರ ಕರಾವಳಿ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಮತ್ತು ರಾಜ್ಯದ ಇತರ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಜೊತೆಗೆ ಉತ್ತರ ಕರಾವಳಿ ತಮಿಳುನಾಡು ಮತ್ತು ಪ್ರತ್ಯೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇತರೆ ವಿಷಯಗಳು:
ಪಡಿತರ ಚೀಟಿದಾರರಿಗೆ ಇನ್ಮುಂದೆ ಸಿಗಲಿದೆ ʼಡಿಜಿಟಲ್ ರೇಷನ್ ಕಾರ್ಡ್ʼ..!